ಜನಪ್ರಿಯ ಒಗಟುಗಳು
- ಗೂಡಿನಲ್ಲಿನ ಪಕ್ಷಿ ನಾಡೆಲ್ಲ ನೋಡುತ್ತದೆ-ಕಣ್ಣು
- ಕಾಸಿನ ಕುದುರೆಗೆ ಬಾಲದ ಲಗಾಮು-ಸೂಜಿ ದಾರ
- ಎಲೆ ಇಲ್ಲ, ಸುಣ್ಣ ಇಲ್ಲ, ಬಣ್ಣವಿಲ್ಲ ತುಟಿ ಕೆಂಪಗಾಗಿದೆ, ಮಳೆಯಿಲ್ಲ , ಬೆಲೆಯಿಲ್ಲ , ಮೈ ಹಸಿರಾಗಿದೆ-ಗಿಳಿ
- ಮನೆ, ಮನೆಗೆರಡು ಬಾಗಿಲು, ಬಾಗಿಲ ಮುಂದೆ , ಮುಚ್ಚಿದರೆ ಹಾನಿ ಇದೇನು?-ಮೂಗು, ಬಾಯಿ
- ಸುತ್ತ ಮುತ್ತ ಸುಣ್ಣದ ಗೋಡೆ, ಎತ್ತ ನೋಡಿದರೂ ಬಾಗಿಲಿಲ್ಲ ಇದು ಏನು?-ಮೊಟ್ಟೆ
- ಅಂಗಳದಲ್ಲಿ ಹುಟ್ಟುವುದು, ಅಂಗಳದಲ್ಲಿ ಬೆಳೆಯುವುದು, ತನ್ನ ಮಕ್ಕಳ ಹಂಗಿಸಿ ಮಾತಾಡುವುದು ಇದು ಏನು? ಕೋಳಿ
- ಇದ್ದಲು ನುಂಗುತ್ತ , ಗದ್ದಲ ಮಾಡುತ್ತಾ, ಉದ್ದಕ್ಕೂ ಓಡುತ್ತಾ ಮುಂದಕ್ಕೆ ಸಾಗುವ ನಾನ್ಯಾರು?-ರೈಲು
- ಊಟಕ್ಕೆ ಕುಳಿತವರು ಹನ್ನೆರಡು ಜನರು, ಬಡಿಸುವವರು ಇಬ್ಬರು, ಒಬ್ಬನು ಒಬ್ಬರಿಗೆ ಬಡಿಸುವಸ್ಟರಲ್ಲಿ ಇನ್ನೊಬ್ಬನು ಹನ್ನೆರಡು ಜನಕ್ಕೂ ಬಡಿಸಿರುತ್ತಾನೆ-ಗಡಿಯಾರ
- ಹಸಿರು ಹಾವರಾಣಿ, ತುಂಬಿದ ತತ್ರಾಣಿ, ಹೇಳದಿದ್ದರೆ ನಿಮ್ಮ ದೇವರಾಣಿ-ಕಲ್ಲಂಗಡಿ ಹಣ್ಣು
- ಮೊಟ್ಟೆ ಒಡೆಯೋ ಹಾಗಿಲ್ಲ ಕೊಡ ಮುಳುಗಿಸೋ ಹಾಗಿಲ್ಲ ಬರಿ ಕೊಡೆ ತಗೊಂಡು ಬಾರೋ ಹಾಗಿಲ್ಲ-ತೆಂಗು
- ಕಡಿದರೆ ಕಚ್ಚೋಕೆ ಆಗೋಲ್ಲ , ಹಿಡದ್ರೆ ಮುಟ್ಟೋಕೆ ಸಿಗೋಲ್ಲ-ನೀರು
- ಒಂದು ರುಮಾಲು ನಮ್ಮಪ್ಪನೂ ಸುತ್ತಲಾರ.-ದಾರಿ
- ಅಬ್ಬಬ್ಬ ಹಬ್ಬ ಬಂತು, ಸಿಹಿಕಹಿ ಎರಡೂ ತಂತು.-ಯುಗಾದಿ
- ಹುಟ್ಟುತ್ತಲೇ ಹುಡುಗ ತಲೆಯಲ್ಲಿ ಟೋಪಿ ಹಾಕಿರುತ್ತೆ .-ಬದನೆಕಾಯಿ.
- ಸಾಗರ ಪುತ್ರ ,ಸಾರಿನ ಮಿತ್ರ.-ಉಪ್ಪು
- ಸಾವಿರಾರು ಹಕ್ಕಿಗಳು, ಒಂದೇ ಬಾರಿಗೆ ನೀರಿಗಿಳಿತವೆ.-ಅಕ್ಕಿ
- ಗುಡುಗು, ಗುಡುಗಿದರೆ ಸಾವಿರ ನಯನಗಳು ಅರಳುವುದು.-ನವಿಲು.
- ಕಣ್ಣಿಲ್ಲ, ಕಾಲಿಲ್ಲ ,ಆದರು ಚಲಿಸುತಿದೆ ಯಾವುದು ಎಲ್ಲಿದೆ ಬಲ್ಲಿದನ ಹೇಳಿರಲ.-ನದಿ
- ಹಲ್ಲಿಲ್ಲದ ಹಕ್ಕಿಗೆ ಗೂಡು ತುಂಬ ಮರಿಗಳು.-ಕೋಳಿ
- ಮೋಟು ಗೋಡೆ ಮೇಲೆ, ದೀಪ ಉರೀತಿದೆ.-ಮೂಗುಬೊಟ್ಟು
- ಹೊಂಚು ಹಾಕಿದ ದೆವ್ವ, ಬೇಡ ಬೇಡ ಎಂದರೂ ಜೂತೆಯೇ ಬರುತ್ತೆ.-ನೆರಳು
- ಮರನು ಮರನೇರಿ ಮತ್ತೆ ಮರನೇರಿ ಬಸವನಾ ಕತ್ತೇರಿ ತಿರುಗುತ್ತಿದೆ-ಗಾಣ
- ಹೊಕ್ಕಿದ್ದು ಒಂದಾಗಿ ಹೊರಟಿದ್ದು ಅದು ನೂರಾಗಿ-ಶ್ಯಾವಿಗೆ
- ಮಣ್ಣು ಆಗಿದೆ ಕಲ್ಲು ಸಿಕ್ಕಿತು, ಕಲ್ಲು ಆಗಿದೆ ಬೆಳ್ಳಿ ಸಿಕ್ಕಿತು, ಬೆಳ್ಳಿ ಒಡೆದ ನೀರು ಸಿಕ್ಕಿತು-ತೆಂಗಿನಕಾಯಿ
- ಕತ್ತಲೆ ಮನೆಯಲಿ ಕಾಳವ್ವ ಕುಂತವ್ಳೆ ಕುಯ್ಯೋ, ಮರ್ರೋ ಅಂತವಳೇ-ತಂಬೂರಿ
- ಹಾರಿದರೆ ಹನುಮಂತ, ಕೂತರೆ ಮುನಿ, ಕೂಗಿದರೆ ಕಾಡಿನ ಒಡೆಯ-ಕಪ್ಪೆ
- ಕೈಲಿದ್ದಾಗ ಗುದಿಸಾಡುತ್ತೇನೆ, ಕೈ ಬಿಟ್ಟಾಗ ಗೊರಕೆ ಒಡೆಯುತ್ತೇನೆ-ಕಸಪೊರಕೆ
- ಗಿಡ ಕೊಡಲಾರದು, ಮರ ಬೆಳೆಸಲಾರದು ಅದಿಲ್ಲದೆ ಊಟ ಸೇರಲಾರದು-ಉಪ್ಪು
- ನೀರಿಲ್ಲದ ಸಮುದ್ರ, ಜನರಿಲ್ಲದ ಪಟ್ಟಣ, ಸಂಚಾರವಿಲ್ಲದ ಮಾರ್ಗಗಳು ಎಲ್ಲಿ?-ನಕ್ಷೆ
- ಒಬ್ಬನನ್ನು ಹಿಡಿದರೆ ಎಲ್ಲಾರ ಮರ್ಜಿಯು ಗೊತ್ತಾಗುತ್ತದೆ.- ಅನ್ನದ ಅಗುಳು.
- ಮೇಲೆ ನೋಡಿದರೆ ನಾನಾ ಬಣ್ಣ, ಉಜ್ಜಿದರೆ ಒಂದೇ ಬಣ್ಣ.-ಸಾಬೂನು.
- ಒಂದು ಕೊಂಬಿನ ಗುಳಿ ಅದರ ತಲೆಯೆಲ್ಲಾ ಮುಳ್ಳು.-ಬದನೆಕಾಯಿ.
- ನಾನು ತುಳಿದೆ ಅದನ್ನ, ಅದು ತುಳಿಯೆತು ನನ್ನನ್ನ.-ನೀರು
- ಕೊಳದ ಒಳಗೆ ಒಂದು ಮರ ಹುಟ್ಟಿ ,ಬೇರು ಇಲ್ಲ ,ನೀರು ಇಲ್ಲ.-ಎಣ್ಣೆ ದೀಪ.
- ಬಡ ಬಡ ಬಂದ ಅಂಗಿ ಕಳಚಿದ ,ಬಾವಿಯೊಳಗೆ ಬಿದ್ದ.-ಬಾಳೆ ಹಣ್ಣು.
- ನೋಡಿದರೆ ನೋಟಗಳು ,ನಕ್ಕರೆ ನಗುಗಳು ,ಒಡೆದರೆ ತುಂಡುಗಳು.-ಕನ್ನಡಿ .
- ಅಕ್ಕ ಪಕ್ಕ ಚದುರಂಗ ,ಅದರ ಹೂವು ಪದುರಂಗ ಅದರ ಹೆಸರು ಅಯ್ಯಯ್ಯಪ್ಪ .ಇದು ಏನು?-ದತ್ತುರಿಯ ಮುಳ್ಳು.
- ವನದಲ್ಲಿ ಹುಟ್ಟಿ ,ವನದಲ್ಲಿ ಬೆಳೆದು ,ವನದಿಂದ ಹೊರಟು ವನಜಲೊನೆ ಶಿರಕ್ಕೆರುವರು.-ಕಮಲ.
- ಕಲ್ಲು ಕೋಳಿ ಕುಗುತ್ತದೆ, ಮುಲ್ಲ ಚೂರಿ ಹಾಕುತ್ತಾನೆ.-ಗಿರಣಿ
- ಸಾವಿರ ತರುತ್ತೆ ಲಕ್ಷ ತರುತ್ತೆ ನೀರಿನಲ್ಲಿ ಹಾಕಿದರೆ ಸಾಯುತ್ತೆ.-ದುಡ್ಡು.
- ತಕ್ಕಡೀಲಿ ಇಟ್ಟು ಮಾರೋ ಹಾಗಿಲ್ಲ, ಅದಿಲ್ಲದೆ ಹಬ್ಬ ಅಗೋ ಹಾಗಿಲ್ಲ.-ಸಗಣಿ.
- ಚರಚರ ಕೊಯ್ತದೆ ಕತ್ತಿ ಅಲ್ಲ, ಮಿಣಿಮಿಣಿ ಮಿಂಚುತ್ತದೆ ಮಿಂಚಲ್ಲ, ಪೆಟ್ಟಿಗೆಗೆ ತುಂಬ್ತದೆ ದಾಗಿನ ಅಲ್ಲ.- ಗರಗಸ.
- ಕಡ್ಲೆ ಕಾಳಷ್ಟು ಹಿಂಡಿ ೩೨ ಮನೆ ಸಾರಿಸಿ ಬಚ್ಚಲ ಪಾಲು ಆಗುತ್ತೆ.-ಹಲ್ಲುಪುಡಿ.
- ಕರಿ ಗುಡ್ಡ-ಬಿಳಿ ನೀರು ಅದ್ರಾಗೆ ಕುಂತವಳೇ ಚಂಪರಾಣಿ.-ಗಡಿಗೆಮಜ್ಜಿಗೆ.
- ಕೆಂಪು ಕುದುರೆ ಮೇಲೆ ಒಬ್ಬ ಏರುತ್ತಾನೆ, ಒಬ್ಬ ಇಳಿಯುತ್ತಾನೆ .-ರೊಟ್ಟಿ, ದೋಸೆ
- ಕೆಂದ ಕುದುರೆ ,ಬಿಳಿ ತಡಿ, ಕರೆ ಲಗಾಮು, ಅಣ್ಣ ಅತ್ತಾನೆ, ತಮ್ಮ ಇಳಿತ್ತಾನೆ-ಬೆಂಕಿ, ಸುಣ್ಣ ಹಚ್ಚಿದ ಹಂಚು, ಹೊಗೆ, ರೊಟ್ಟಿ
- ಕಂಬ ಕಂಬದ ಮೇಲೆ ದಿಂಬ, ದಿಂಬದ ಮೇಲೆ ಲಾಗಲೂಟೆ, ಲಾಗಲೂಟೆ ಮೇಲೆ ಎರಡು ಹುಡ್ಗರು ಓಡ್ಯಾಡುತಾರೆ.-ಕಣ್ಣು.
- ಶತ್ತಗಿಂಡಿ, ಶಾರಾಗಿಂಡಿ, ನೀರಾಗಿ ಹಕ್ಕಿದರೆ ಮುಳುಗದು ಮುತ್ತಿನ ಗಿಂಡಿ.-ಬೆಣ್ಣೆ ಉಂಡೆ.
- ಕುತ್ತಿಗೆ ಇದೆ ತಲೆ ಇಲ್ಲ, ತೋಳಿದೆ ಬೆರಳಿಲ್ಲ, ದಡಾ ಇದೆ, ಕಾಲಿಲ್ಲ.-ಅಂಗಿ.
- ಹಸಿರು ಮೈ ಹಳದಿ ಮೈ ಪೇಟೇಲಿ ಕುಳಿತು ಎಲ್ಲರನ್ನು ಕರೆಯುತ್ತೆ-ಮಾವು
- ಹುಲಿಯ ಚಿಕ್ಕಮ್ಮ , ಇಲಿಯ ಮುಕ್ಕಮ್ಮ-ಬೆಕ್ಕು
- ಕೂಗಿದರೆ ರಾವಣ, ಹಾರಿದರೆ ಹನುಮಂತ, ಕೂತರೆ ಮುನಿ_ಕಪ್ಪೆ
- ಕಲ್ಲಲ್ಲಿ ಹುಟ್ಟುವುದು, ಕಲ್ಲಲ್ಲಿ ಬೆಳೆಯುವುದು, ನೆತ್ತಿಯಲ್ಲಿ ಕುತಗುಟ್ಟುವುದು-ಸುಣ್ಣ
- ಕಾಂತಾಮಣಿ ಎಂಬ ಪಕ್ಷಿ, ಚಿಂತಾಮಣಿ ಎಂಬ ಕೆರೆ, ಕೆರೆಯಲ್ಲಿ ನೀರಿಲ್ದೆ ಹೋದ್ರೆ ಪಕ್ಷಿಗೆ ಮರಣ-ದೀಪ
- ಕಲ್ಲು ತುಳಿಯುತ್ತೆ, ಮುಳ್ಳು ಮೆಯುತ್ತೆ, ನೀರು ಕಂಡ್ರೆ ನಿಲ್ಲುತ್ತೆ-ಚಪ್ಪಲಿ
- ಕಾಲಿಲ್ಲದೇ ನಡೆಯುವುದು, ತಲೆ ಎಲ್ಲಡೆ ನುಡಿಯುವುದು, ಮೇಲು ಕೆಳಗಾಗಿ ಓದುವುದು-ನದಿ
- ಜಂಬು ನೇರಳೆ ಮರ, ಎಳೆದರೆ ನಾಲ್ಕು ಬಾವಿ ನೀರು ಒಂದೇ ಆಗುತ್ತದೆ-ಮೇಡು
- ಇಡೀ ಮನೆಗೆಲ್ಲ ಒಂದೇ ಕಂಬಳಿ, ಬಾಯಿ ತೆರೆದರೆ ಮೂಗು ಮುಚ್ಚುತ್ತಿ-ಆಕಾಶ
- ಒಂದು ಕಾಲಿನ ಪಕ್ಷಿಗೆ ಒಂಭತ್ತು ರೆಕ್ಕೆ, ಒಂದೇ ಕಾಲಲಿ ನಿಂತು ನೂರಾರು ಮೊಟ್ಟೆ ಇಡುತ್ತದೆ-ಜೋಳದ ದಂಟು
- ಎತ್ತ ಹೋದರು ಕುತ್ತಿಗೆಗೆ ಕೈ ಹಾಕುತ್ತಾರೆ! ನಾನ್ಯಾರು?-ಸಾಲಿಗ್ರಾಮ
- ಕರಿ ಹುಡುಗನಿಗೆ ಬಿಳಿ ಟೋಪಿ -ಹೆಂಡದ ಮಡಿಕೆ
- ಬಿಳಿ ಆಕಾಶದಲ್ಲಿ ಕಪ್ಪು ನಕ್ಷತ್ರಗಳು,ಇದನ್ನು ನೋಡಲು ಜನ ಕಾದಿಹರು-ನಾಣ್ಯ
- ಗೋಡೆ ಗುದ್ದಪ್ಪ ನೀನಿದ್ದಲ್ಲಿ ನಿದ್ದೆ ಇಲ್ಲಪ್ಪ.-ತಿಗಣೆ
- ಕುದುರೆ ಬಾಲದಿಂದ ನೀರು ಕುಡಿಯುತ್ತದೆ-ಹೇನು
- ಬಿಳಿ ಸಾಮ್ರಾಜ್ಯದಲ್ಲಿ ಕಪ್ಪು ಪ್ರಜೆಗಳು.-ಸೀತ ಫಲ
- ಅಣ್ಣ ಅತ್ತರೆ ತಮ್ಮನೂ ಅಳುತ್ತಾನೆ.-ಕಣ್ಣು
- ಮನೆ ಮೇಲೆ ಮಲ್ಲಿಗೆ ಹೂವು.-ಮಂಜು
- ಹಾರಿದರೆ ಹನುಮಂತ ಕೂಗಿದರೆ ಶಂಖ.-ಕಪ್ಪೆ
- ನೋಡಿದರೆ ಕಲ್ಲು ನೀರು ಹಾಕಿದರೆ ಮಣ್ಣು.-ಸುಣ್ಣ
- ಸುದ್ದಿ ಸೂರಪ್ಪ ದೇಶವೆಲ್ಲಾ ಸುತ್ತಾಡ್ತಾನೆ.-ಪೋಸ್ಟ್ ಕಾರ್ಡ್
- ಬಿಳಿ ಕುದುರೆಗೆ ಹಸಿರು ಬಾಲ.-ಮೂಲಂಗಿ
- ಚಿಕ್ಕ ಬೆಟ್ಟದಲ್ಲಿ ಪುಟ್ಟ ಚಂದ್ರ.-ಕುಂಕುಮ
- ಬರೋದ ಕಂಡು ಕೈ ಒಡ್ತಾರೆ.-ಬಸ್
- ಹಸಿರು ಮುಖಕ್ಕೆ ವಿಪರೀತ ಕೋಪ , ಕೋಪ ಮಾಡಿಕೊಳ್ಳದೆ ನಾನ್ಯಾರೆಂದು ಹೇಳಿ?-ಮೆಣಸಿನಕಾಯಿ
- ಅಜ್ಜಿ ಗುದ್ದಿದರೆ ಮನೆಯೆಲ್ಲ ಮಕ್ಕಳು ಈಗ ಹೇಳಿ ನಾನ್ಯಾರು-ಬೆಳ್ಳುಳ್ಳಿ
- ಹಗಲಲ್ಲಿ ಮಾಯಾ ರಾತ್ರಿಯಲ್ಲಿ ಪ್ರತ್ಯಕ್ಷ ?ನಾನ್ಯಾರು ಹೇಳಿ?-ನಕ್ಷತ್ರ
- ಮೂರೂ ಪಕ್ಷಿಗಳು ಗೂಡಿಗೆ ಹೋಗುವಾಗ ಬೇರೆ ಬೇರೆ ಬಣ್ಣ ಬರುವಾಗ ಬಣ್ಣ-ಎಲೆ ಅದಿಕೆ
- ಆಕಾಶದೊಳಗಿನ ಗಿಣಿ ಊಟದ ಹೊತ್ತಿಗೆ ರಾಣಿ-ಬಾಳೆಲೆ
- ಎರಡು ಬಾವಿಗಳ ನಡುವೆಯೊಂದು ಸೇತುವೆ-ಮೂಗು
- ತಲೆ ಇಲ್ಲ , ನಡು ಇಲ್ಲ , ಕೈಗಳಿದ್ದರು ಬೆರಳಿಲ್ಲ-ಕೋಟು ಅಂಗಿ
- ತಿಂಡಿಗೆ ಕಡಿಮೆ ಇಲ್ಲ ,ತೀರ್ಥ ಕುಡಿದರೆ ಸಾವು -ವಿಷ
- ಒಬ್ಬಳು ಮುಲುಗಿದಳು, ಒಬ್ಬಳು ಕರಗಿದಳು , ಒಬ್ಬಳು ತೇಲಿದಳು -ಅಡಿಕೆ , ಸುಣ್ಣ
- ಹೋಗೋದು ಮುಳುಗೋದು ತರೋದು ಏನು?-ಬಿಂದಿಗೆ
- ಕಿರೀಟ ಇದೆ ರಾಜ ಅಲ್ಲ, ಕಲ ತಿಳಿಸುತ್ತ್ತೆ ಗಡಿಯಾರವಲ್ಲ-ಕೋಳಿ
- ಒಂದು ಹಣ್ಣಿಗೆ ಹನ್ನೆರಡು ತೊಳೆ ಮತ್ತೂ ಮೂವತ್ತು ಬೀಜ-ವರ್ಷ
- ಗುಂಡಾಕಾರ ಮೈಯೆಲ್ಲಾ ತೂತು-ದೋಸೆ
- ಬಂಗಾರದ ಗುಬ್ಬಿ ಬಾಲದಲ್ಲೇ ನೀರನ್ನು ಕುಡಿಯುತ್ತೆ-ಚಿಮಿಣಿ
- ಒಂದು ಮರ , ಮರದಾಗ ಅಲ್ಲ, ಅಲ್ಲಿನಾಗ ಕೊಬ್ರಿ ಗುಂಡ-ಆಕಾಶ ನಕ್ಷತ್ರ ಚಂದ್ರ
- ಹಗ್ಗ ಹಾಸಿದೆ ಕೋಣ ಮಲಗಿದೆ-ಕುಂಬಳಕಾಯಿ, ಬಳ್ಳಿ
- ನನ್ನ ಕಂಡರೆ ಎಲ್ಲರು ಓದೀತಾರೆ -ಚೆಂಡು
- ಹಳ್ಳಿ ಗಡಿಯಾರ, ಒಳ್ಳೆ ಆಹಾರ-ಕೋಳಿ
- ಅನ್ನ ಮಾಡಲಿಕ್ಕೆ ಬಾರದಂತಹ ಅಕ್ಕಿ ಯಾವುದು-ಏಲಕ್ಕಿ
- ಬೆಳ್ಳಿ ಬಟ್ಟಲಲ್ಲಿ ಮುತ್ತಿನ ಬಿಂದು-ತಾರೆ
- ಲಟಪಟ ಲೇಡಿಗೆ ಒಂದೇ ಕಣ್ಣು-ಸೂಜಿ
- ಹಸಿರು ಕೋಲಿಗೆ ಮುತ್ತಿನ ತುರಾಯಿ-ಜೋಳದ ತೆನೆ
- ಬಿಳಿ ಹುಲ್ಲಲ್ಲಿ ಕೆಂಪು ಕುರಿಮರಿ-ನಾಲಿಗೆ
- ಸೂಜಿ ಸಣ್ಣಕಾಗೆ ಬಣ್ಣ -ಕೂದಲು
- ಆರು ಕಾಲಿನ ಆನೆ, ಆನೆ ತಿನ್ನುತ್ತೆ ನೀರು ಕುಡಿಯಲ್ಲ-ನುಸಿ
- ಊರಿಗೆಲ್ಲ ಒಂದೇ ಕಂಬಳಿ-ಆಕಾಶ
- ಅಟ್ಟದ ಮೇಲೆ ಪುಟ್ಟ ಲಕ್ಷ್ಮಿ-ಕುಂಕುಮ
- ಕರಿ ಹೊಲದ ಮದ್ಯದಲ್ಲಿ ಬೇಲಿ ದಾರಿ-ಬೈತಲೆ
- ಒಂದು ಬತ್ತಿ ಮನೆಯೆಲ್ಲ ಬೆಳಕು-ಸೂರ್ಯ
- ಕಣ್ಣಿಗೆ ಕಾಣೋದಿಲ್ಲ, ಕೈಗೆ ಸಿಗೋದಿಲ್ಲ -ಗಾಳಿ
- ಕಣ್ಣಿಗೆ ಹತ್ತಿರ ಕಾಲಿಗೆ ದೂರ-ಬೆಟ್ಟ
- ಊಟಕ್ಕೆ ಮೊದಲು ನಾನು ಅಂತ ಬರುತ್ತೆ -ಬಾಳೆ ಎಲೆ , ತಟ್ಟೆ
- ಹತ್ತಾರು ಮಕ್ಕಳ ತಂದೆ ಅದಕ್ಕೆ ತಲೆಯ ಮೇಲೆ ಜುಟ್ಟು-ಹುಂಜ
- ಹೋದರು ಇರುತ್ತೆ ಬಂದರೂ ಕಾಡುತ್ತೆ.ಇದು ಏನು?-ನೆನಪು
- ನೀಲಿ ಸಾಗರದಲ್ಲಿ ಬೆಳ್ಳನೆ ಮೀನುಗಳು ನಾನ್ಯಾರು?-ತಾರೆಗಳು
- ಬಿಡಿಸಿದರೆ ಹೂವು, ಮದಚಿದರೆ ಮೊಗ್ಗು ,ಇದು ಏನು?-ಛತ್ರಿ
- ಆರು ಕಾಲು ಅಂಕಣ್ಣ ಮೂರು ಕಾಲು ದೊಂಕಣ್ಣ ಸದಾ ಮೀಸೆ ತಿರುವಣ್ಣ-ನೊಣ
- ಒಂಟಿಕಾಲಿನ ಕುಂಟ. ನಾನ್ಯಾರು?-ಬುಗರಿ
- ಕಪ್ಪು ಕಂಬಳಿ ನೆಂಟ ಎಲ್ಲವನು ನಾಶ ಮಾಡೋಕೆ ಹೊಂಟ-ಇಲಿ
- ಹಲ್ಲು ಹಾಕಿದರೆ ಹಾಲು ಕೆಡೋಲ್ಲ ಕಲ್ಲು ಹಾಕಿದರೆ ಕೆಡುತ್ತೇ-ಕಳ್ಳಿ
- ಕಾಡಿನಲ್ಲಿ ಹುಟ್ಟುವುದು ಕಾಡಿನಲ್ಲಿ ಬೆಳೆಯುವುದು ಕಡಿದಲ್ಲಿ ಕಂಪ ಸೂಸುವೆನು-ಶ್ರೀಗಂಧ
- ಹಸಿರು ಕೋಟೆ, ಬಿಳಿ ಕೋಟೆ, ಕೆಂಪಿನ ಕೋಟೆ ಈ ಕೋಟೆಯೊಳಗೆ ಕಪ್ಪು ಸಿಪಾಯಿಗಳು-ಪರಂಗಿ ಹಣ್ಣು
- ಒಂದು ಮನೆಯಲ್ಲಿ ಮೂರು ಜನ ಅಕ್ಕ-ತಂಗಿಯರಿದ್ದಾರೆ ಆದರೆ ಒಬ್ಬರ ಮುಖ ಕಂಡರೆ ಒಬ್ಬರಿಗೆ ಕಾಣೋಲ್ಲ- ಜಾದಳಕಾಯಿ
- ಅಂಕಡೊಂಕಿನ ಬಾವಿ ಹೊಕ್ಕು ನೋಡಿದ್ರೆ ಮುಕ್ಕ ನೀರಿಲ್ಲ-ಕಿವಿ
- ಕೆಂಪು ಕುದುರೆ ಕರಿ ತಡಿ ಒಬ್ಬ ಏರುತಾನೆ ಒಬ್ಬ ಇಳಿತಾನೆ-ರೊಟ್ಟಿ
- ಹತ್ತಾರು ಮಕ್ಕಳ ತಂದೆ ಅದಕ್ಕೆ ತಲೆಯ ಮೇಲೆ ಜುಟ್ಟು-ಹುಂಜ
- ಹೋದರು ಇರುತ್ತೆ ಬಂದರೂ ಕಾಡುತ್ತೆ.ಇದು ಏನು?-ನೆನಪು
- ನೀಲಿ ಸಾಗರದಲ್ಲಿ ಬೆಳ್ಳನೆ ಮೀನುಗಳು ನಾನ್ಯಾರು?-ತಾರೆಗಳು
- ಬಿಡಿಸಿದರೆ ಹೂವು, ಮದಚಿದರೆ ಮೊಗ್ಗು ,ಇದು ಏನು?-ಛತ್ರಿ
- ಆರು ಕಾಲು ಅಂಕಣ್ಣ ಮೂರು ಕಾಲು ದೊಂಕಣ್ಣ ಸದಾ ಮೀಸೆ ತಿರುವಣ್ಣ-ನೊಣ
- ಒಂಟಿಕಾಲಿನ ಕುಂಟ. ನಾನ್ಯಾರು?-ಬುಗರಿ
- ಕಪ್ಪು ಕಂಬಳಿ ನೆಂಟ ಎಲ್ಲವನು ನಾಶ ಮಾಡೋಕೆ ಹೊಂಟ-ಇಲಿ
- ಹಲ್ಲು ಹಾಕಿದರೆ ಹಾಲು ಕೆಡೋಲ್ಲ ಕಲ್ಲು ಹಾಕಿದರೆ ಕೆಡುತ್ತೇ-ಕಳ್ಳಿ
- ಕಾಡಿನಲ್ಲಿ ಹುಟ್ಟುವುದು ಕಾಡಿನಲ್ಲಿ ಬೆಳೆಯುವುದು ಕಡಿದಲ್ಲಿ ಕಂಪ ಸೂಸುವೆನು-ಶ್ರೀಗಂಧ
- ಹಸಿರು ಕೋಟೆ, ಬಿಳಿ ಕೋಟೆ, ಕೆಂಪಿನ ಕೋಟೆ ಈ ಕೋಟೆಯೊಳಗೆ ಕಪ್ಪು ಸಿಪಾಯಿಗಳು-ಪರಂಗಿ ಹಣ್ಣು
- ಒಂದು ಮನೆಯಲ್ಲಿ ಮೂರು ಜನ ಅಕ್ಕ-ತಂಗಿಯರಿದ್ದಾರೆ ಆದರೆ ಒಬ್ಬರ ಮುಖ ಕಂಡರೆ ಒಬ್ಬರಿಗೆ ಕಾಣೋಲ್ಲ- ಜಾದಳಕಾಯಿ
- ಅಂಕಡೊಂಕಿನ ಬಾವಿ ಹೊಕ್ಕು ನೋಡಿದ್ರೆ ಮುಕ್ಕ ನೀರಿಲ್ಲ-ಕಿವಿ
- ಕೆಂಪು ಕುದುರೆ ಕರಿ ತಡಿ ಒಬ್ಬ ಏರುತಾನೆ ಒಬ್ಬ ಇಳಿತಾನೆ-ರೊಟ್ಟಿ
- ಹಸಿರು ಗಿಡದ ಮೇಲೆ ಮೊಸರು ಚೆಲ್ಲಿದೆ-ಮಲ್ಲಿಗೆ
- ಅಂಗೈ ಅಗಲದ ರೊಟ್ಟಿಗೆ ಲೆಕ್ಕವಿಲ್ಲದಷ್ಟು ಉಪ್ಪಿನಕಾಯಿ-ಆಕಾಶ, ನಕ್ಷತ್ರ
- ಸುಟ್ಟ ಹೆಣ ಮತ್ತೆ ಸುಡ್ತಾರೆ-ಇದ್ದಿಲು
- ಚಿನ್ನದ ಪೆಟ್ಟಿಗೆಯಲ್ಲಿ ಬೆಳ್ಳಿ ಲಿಂಗ- ಹಲಸಿನ ಹಣ್ಣು , ಬೀಜ
- ಅಂಗೈ ಕೊಟ್ಟರೆ ಮುಂಗೈನೂ ನುಂಗುತ್ತದೆ- ಬಳೆ
- ಒಂದು ಹಪ್ಪಳ ಊರಿಗೆಲ್ಲ ಊಟ- ಚಂದ್ರ
- ಆಕಾಶದಲ್ಲಿ ಕೊಡಲಿಗಳು ತೇಲಾಡುತ್ತವೆ- ಹುಣಸೇಹಣ್ಣು
- ನೀಲಿ ಕೆರೆಯಲಿ ಬಿಳಿ ಮೀನು-ನಕ್ಷತ್ರ
- ಒಂದು ತೇಲುತ್ತೆ ,ಒಂದು ಮುಳುಗುತ್ತೆ, ಒಂದು ಕರಗುತ್ತೆ.-ವಾರ,ತಿಂಗಳು,ವರ್ಷ
- ಬಾ ಅಂದರೆ ಬರೋಲ್ಲ , ಹೋಗು ಅಂದರೆ ಹೋಗೋಲ್ಲ-ಮಳೆ
- ನಾ ಇರುವಾಗ ಬರುತ್ತೆ , ನಾ ಹೋದ ಮೇಲೂ ಇರುತ್ತೆ-ಕೀರ್ತಿ
- ಬೆಳ್ಳಿ ಸಮುದ್ರದಲ್ಲಿ ಕಪ್ಪು ಸೂರ್ಯ-ಕಣ್ಣು
- ಅಕ್ಕನ ಮೇಲೆ ಛತ್ರಿ- ರೆಪ್ಪೆ
- ತಮ್ಮಂಗೆ ಮೂರು ಕಣ್ಣು ಅಮ್ಮಂಗೆ ಒಂದೇ ಕಣ್ಣು-ತೆಂಗಿನ ಕಾಯಿ
- ಅಕ್ಕ ಓದುತ್ತಾಳೆ ತಂಗಿ ನಡೀತ್ತಾಳೆ-ಕಣ್ಣು
- ಅಮ್ಮನ ಆಕಾಶವಾಣಿ ನಾನು-ಮಗು
- ಅಂಗಡಿಯಿಂದ ತರೋದು ಮುಂದಿಟ್ಟುಕೊಂಡು ಅಳೋದು-ಈರುಳ್ಳಿ
- ಅಂಗಣ್ಣ ಮಂಗಣ್ಣ ಅಂಗಿ ಬಿಚ್ಚಿಕೊಂಡು ನುಂಗಣ್ಣ- ಬಾಳೆಹಣ್ಣು
- ಗೂಡ್ನಲ್ಲಿರೋ ಜೋಡಿ ಪಕ್ಷಿ ಊರೆಲ್ಲ ನೋಡುತ್ತೆ-ಕಣ್ಣು
- ಒಂದು ಮಡಕೆ, ಮಡಕೆಯೊಳಗೆ, ಕುಡಿಕೆ, ಕುಡಿಕೆಯಲ್ಲಿ ಸಾಗರ-ತೆಂಗಿನ ಕಾಯಿ
- ನೀನಿಲ್ಲದೆ ಊಟವಿಲ್ಲ- ಉಪ್ಪು
- ಬಿಳಿ ಸರದಾರನಿಗೆ ಕರಿ ಟೋಪಿ-ಬೆಂಕಿಕಡ್ಡಿ
- ಕಾಲಿಲ್ದ ಹುಡುಗಿಗೆ ಮಾರುದ್ದ ಕಡಿವಾಣ - ಸೂಜಿ
- ಮೂರು ಕಾಸಿನ ಕುದುರೆಗೆ ಮುನ್ನೂರು ರೂಪಾಯಿನ ಹಗ್ಗ-ಹೇನು ಕೂದಲು
- ಕೆಂಪು ಕುದುರೆಗೆ ಲಗಾಮು, ಓಬ್ಬ ಹತ್ತುತ್ತಾನೆ , ಇನ್ನೊಬ್ಬ ಇಳಿತಾನೇ-ಬೆಂಕಿ,ಬಾಣಲೆ, ದೋಸೆ
- ಒಂದು ಮನೆಗೆ ಒಂದೇ ತೊಲೆ-ತಲೆ
- ಕಂದ ಬಂದ ಕೊಂದ ತಂದ-ಶ್ರೀ ರಾಮ ಚಂದ್ರ
- ಕಲ್ಲಿಲ್ಲದ ಬೆಟ್ಟ ಮರಳಿಲ್ಲದ ಮರುಭೂಮಿ-ಭೂಪಟ
- ಚಿಕ್ಕಕ್ಕನಿಗೆ ಪುಕ್ಕುದ್ದ-ಸೌಟು
- ಎರಡು ಮನೆಗೆ ಒಂದೇ ದೂಲ-ಮೂಗು
- ಸಾವಿರ ಮಕ್ಕಳಿಗೆ ಒಂದೇ ಉಡಿದಾರ - ಪರಕೆ
- ಅಮ್ಮನ ಸೀರೆಯ ಮಡಿಸಾಲಾರೆ ಅಪ್ಪನ ದುಡ್ಡನು ಎಣಿಸಲಾರೆ! - ಆಕಾಶ, ನಕ್ಷತ್ರ
- ಮರದೊಳಗೆ ಮರ ಹುಟ್ಟಿ ಮರ ಚಕ್ರ ಕಾಯಾಗಿ ತಿನ್ನಲಾರದ ಹಣ್ಣು ಬಲು ರುಚಿ - ಮಗು.
- ಹಾರುವುದು ಹಕ್ಕಿಯಲ್ಲ, ಕೊಂಬು ಉಂಟು ಗೂಳಿಯಲ್ಲ, ಬಾಲ ಉಂಟು ಕೋತಿಯಲ್ಲ - ಗಾಳಿಪಟ.